ಕಾಶಿಪಟ್ಣ ಶಾಲಾ ಪ್ರಾರಂಭೋತ್ಸವ

0

ಕಾಶಿಪಟ್ಣ:ಸರಕಾರಿ ಪ್ರೌಢಶಾಲೆ ಕಾಶಿಪಟ್ಣ 2023 -24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಿಲ್ಪಾ ಉದ್ಘಾಟಿಸಿದರು .ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸತೀಶ್ ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಹೊಸದಾಗಿ ಸೇರ್ಪಡೆಗೊಂಡ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಹೂವನ್ನು ನೀಡುವುದರ ಮೂಲಕ ಸ್ವಾಗತಿಸಲಾಯಿತು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಅತಿಥಿಗಳು ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪದ್ಮಿನಿ 2023-24ನೇ ಸಾಲಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು . ಶ್ರೀಮತಿ ವಿಜಯಾಂಬಿಕಾ ಎಂಟನೇ ತರಗತಿ ವಿದ್ಯಾರ್ಥಿಗಳನ್ನು ಸಭೆಗೆ ಪರಿಚಯಿಸಿದರು .ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿ, ಶ್ರೀಮತಿ ಸರೀನ್ ತಾಜ್ ವಂದಿಸಿದರು. ಶಿಕ್ಷಕ ದೇವದಾಸ್ ನಾಯಕ್ ನಿರೂಪಿಸಿದರು. ಶ್ರೀಮತಿ ಸೌಮ್ಯ ಸಹಕರಿಸಿದರು. ವೇದಿಕೆಯಲ್ಲಿ ಎಸ್ ಡಿ ಎಂ ಸಿ ಸದಸ್ಯರಾದ ಯಶೋಧರ ನಲ್ಲರಬೆಟ್ಟು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here