Site icon Suddi Belthangady

ಬಂದಾರು: ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

ಬಂದಾರು: ಬಂದಾರು ಗ್ರಾಮದ ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆ ಇಲ್ಲಿ ಶೈಕ್ಷಣಿಕ ಶಾಲಾ ಪ್ರಾರಂಭೋತ್ಸವವು ಸಕಲ ಸಿದ್ದತೆಯೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಮಹಾಬಲ ಗೌಡ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಕೊರಮೇರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಹಾಗೂ ಪೆನ್ನು ವಿತರಿಸಲಾಯಿತು.‌‌ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಅನಿತಾ ಕುರುಡಂಗೆ, ಮುತ್ತಪ್ಪ ಗೌಡ, ರಾಮಣ್ಣ ಗೌಡ, ವಾಸಪ್ಪ ಗೌಡ, ಹಾಗೂ ಶಿಕ್ಷಕ ವೃಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Exit mobile version