ಮುಂಡಾಜೆ ಕಾಲೇಜು: ಶೈಕ್ಷಣಿಕ ವರ್ಷದ ಆರಂಭೋತ್ಸವ

0

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾಲೇಜು ವಿಭಾಗದಲ್ಲಿ ಜೂ.1 ರಂದು 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭೋತ್ಸವ ನಡೆಯಿತು.

ಎಲ್ಲಾ ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆಯ ಉಪನ್ಯಾಸಕರು ಭಾರತೀಯ ಸಂಸ್ಕೃತಿಯಂತೆ ಹಣೆಗೆ ತಿಲಕವನ್ನಿಟ್ಟು ಪುಷ್ಪವನ್ನು ನೀಡಿ, ಆರತಿ ಬೆಳಗಿಸಿ ಸ್ವಾಗತಿಸಿದರು.ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿರುವ ವಿನಯಚಂದ್ರ ಅವರು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿಸಿ ಶೈಕ್ಷಣಿಕ ವರ್ಷಕ್ಕೆ ಚಾಲನೆಯನ್ನು ನೀಡಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆ ವಹಿಸಿ, ನೂತನ ವಿದ್ಯಾರ್ಥಿಗಳಿಗೆ ಸ್ವಾಗತವನ್ನು ಕೋರಿದರು.ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಇವರು ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಗಳನ್ನು ವಿವರಿಸಿದರು. ಉಪನ್ಯಾಸಕಿ ಗೀತಾ ಇವರು ಸ್ವಾಗತಿಸಿ, ವಸಂತಿ ಇವರು ನಿರೂಪಿಸಿದರು.ನಮಿತ ಕೆ.ಆರ್ ಇವರು ಧನ್ಯವಾದವಿತ್ತರು.ಆ ಬಳಿಕ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿಯನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here