ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರಗಳು ಕೆಟ್ಟು ಹೋಗಿದ್ದು ರೋಗಿಗಳಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಹಲವಾರು ರೋಗಿಗಳು ಮಾಜಿ ಶಾಸಕ ಕೆ.ವಸಂತ ಬಂಗೇರ ರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಲು ವಸಂತ ಬಂಗೇರ ಜೂ.2 ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಕೇಳಿದರು.
ಡಯಾಲಿಸ್ ವಿಭಾಗದಲ್ಲಿ ವೈದ್ಯಾಧಿಕಾರಿಗಳು ಇಲ್ಲದಿದ್ದ ಕಾರಣ ಅವರನ್ನು ತರಾಟೆಗೆ ತೆಗೆದುಕೊಂಡರು.ಬಳಿಕ ಆಸ್ಪತ್ರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳು ಬೇಕಾದ ಸೌಲಭ್ಯಗಳು ಇದ್ದರೂ, ಕೆಟ್ಟು ನಿಂತಿದೆ.
ಈ ಬಗ್ಗೆ ಡಿ.ಹೆಚ್.ಒ ಗೆ ಕರೆ ಮಾಡಿ ಅವರನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಬೇಕಾದ ವ್ಯವಸ್ಥೆಯನ್ನು 17 ತಾರೀಕಿನ ಒಳಗೆ ಪೂರ್ಣಗೊಳಿಸಬೇಕು ಎಂದು ಎಚ್ಚರಿಕೆ ನೀಡಿದರು.ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾದ ಔಷದ ಸಿಗುವುದಿಲ್ಲ, ವೈದ್ಯರು ರೋಗಿಗಳನ್ನು ಸರಿಯಾಗಿ ಪರೀಕ್ಷೆ ಮಾಡುವುದಿಲ್ಲ ಎಂದು ಆರೋಪಿಸಿದರು.
ಈ ಸಂಧರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಬಿ.ಎಂ ಭಟ್, ವಕೀಲ ಮೋಹನ್ ಕುಮಾರ್, ಧರಣೇಂದ್ರ ಕುಮಾರ್ ನಾರಾವಿ, ಜಯವಿಕ್ರಮ್ ನೆರೆದಿದ್ದರು.