ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

0

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ.ಶಾಲೆ, ಧರ್ಮಸ್ಥಳದ ಪ್ರಾರಂಭೋತ್ಸವವು ದೀಪ ಬೆಳಗುವ ಮೂಲಕ ಉದ್ಘಾಟಿಸಿದ ಶಾಲಾ ಸಂಚಾಲಕರಾದ ಶ್ರೀಯುತ ಅನಂತಪದ್ಮನಾಭ ಭಟ್ ನೂತನ ಶೈಕ್ಷಣಿಕ ವರ್ಷಕ್ಕೆ ಎಲ್ಲರಿಗೂ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯರಾವ್ ರವರು ಮಾತನಾಡಿ ಪೋಷಕರು ಮತ್ತು ಶಿಕ್ಷಕರ ನಡುವಿನ ಬಾಂಧವ್ಯ ಮಕ್ಕಳ ಪ್ರಗತಿಗೆ ಪೂರಕವಾಗಿದ್ದು ಗುಣಾತ್ಮಕ ಕಲಿಕಾ ವರ್ಷದಲ್ಲಿ ಮಕ್ಕಳ ಕಲಿಕೆ ಸಂತಸದಾಯಕವಾಗಿರಲಿ ಎಂದು ಹೇಳಿದರು.
ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಆರತಿ ಎತ್ತಿ, ಪನ್ನೀರು ಚಿಮುಕಿಸಿ ಗುಲಾಬಿ ಹೂವು, ಪುಸ್ತಕ, ಸ್ಲೇಟು ಬಳಪ, ಸಿಹಿತಿಂಡಿ ನೀಡಿ ಸಂಭ್ರಮದಿಂದ ಬರಮಾಡಿಕೊಂಡರು.ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.
ಹಿರಿಯ ಶಿಕ್ಷಕಿ ಗಿರಿಜಾರವರು ಸ್ವಾಗತಿಸಿ ಉಷಾರವರು ವಂದನಾರ್ಪನೆಗೈದ ಕಾರ್ಯಕ್ರಮವನ್ನು ಪೂರ್ಣಿಮಾ ಜೋಷಿ ನಿರೂಪಿಸಿದರು.ಆಡಳಿತ ಮಂಡಳಿಯ ವತಿಯಿಂದ ಎಲ್ಲರಿಗೂ ಸಿಹಿತಿಂಡಿಯನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here