ಉಜಿರೆ: ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವು ಅತ್ಯಂತ ವಿಜ್ರಂಭಣೆಯಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ.ಸೋಮಶೇಖರ್ ಶೆಟ್ಟಿ ಅವರು ಮಾತನಾಡುತ್ತಾ ‘ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಶಿಕ್ಷಣವನ್ನು ನೀಡುತ್ತದೆ’ ಎಂದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಹೆಚ್.ಆರ್. ಮ್ಯಾನೇಜರ್ ಶ್ರೀ ಕೃಷ್ಣ ಮಯ್ಯರು ಮಾತನಾಡುತ್ತಾ ‘ಕನ್ನಡ ಮಾಧ್ಯಮ ಎಂಬ ಕೀಳರಿಮೆ ನಿಮಗೆ ಬೇಡ’ ಎಂದು ಪೋಷಕರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ವಿಜಯ ಜಿ ಗೌಡ, ಶಾಲಾ ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ಅಬೂಬಕ್ಕರ್, ಸದಸ್ಯರಾದ ಶೀಲಾವತಿ, ಹಿರಿಯ ಶಿಕ್ಷಕಿ ಗೀತಾ ಮಕ್ಕಳಿಗೆ ಶುಭ ಹಾರೈಸಿದರು.ಅನುಷಾ ಕಾರ್ಯಕ್ರಮ ನಿರೂಪಿಸಿ, ಶಾಲಾ ಶಿಕ್ಷಕ ಕೂಸಪ್ಪಗೌಡ ವಂದಿಸಿದರು.ಆಡಳಿತ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.