Site icon Suddi Belthangady

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

ಶಿಬಾಜೆ : ಶಿಬಾಜೆ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜೂ.5 ರಂದು ಪೆರ್ಲ ರಾಜೀವ ಗಾಂಧಿ ಸೇವಾ ಕೇಂದ್ರಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರತೀಶ್ ಬಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಂತ್ ಮಾರ್ಗದರ್ಶನ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.
ಸಭೆಯಲ್ಲಿ ವಾರ್ಡ್‌ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಓದಿ ಅನುಮೋದನೆ ಪಡೆಯಲಾಯಿತು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.

ಒಡಿಶಾದ ರೈಲು ದುರಂತದಲ್ಲಿ ನಿಧನರಾದ ಪ್ರಯಾಣಿಕರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿನಯಚಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ದಿನಕರ ಯಮುನಾ, ರತ್ನಾ, ವನಿತಾ ಶೆಟ್ಟಿಗಾರ್, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪೆರ್ಲ ಶಾಲಾ ಮಕ್ಕಳು ಪ್ರಾರ್ಥಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಸ್ವಾಗತಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Exit mobile version