Site icon Suddi Belthangady

ಕನ್ಯಾಡಿ-1: ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕನ್ಯಾಡಿ-1: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-1 ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಪ್ರಮುಖವಾಗಿ ಶಾಲೆಯ ಆವರಣದಲ್ಲಿ ಗಿಡವನ್ನು ನೆಡುವ ಮೂಲಕ ಹಾಗೂ ಶಾಲಾ ತರಕಾರಿ ತೋಟದಲ್ಲಿ ವಿವಿಧ ಬಗೆಯ ತರಕಾರಿ ಬೀಜಗಳನ್ನು ಬಿತ್ತುವ ಮೂಲಕ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.ಅದೇ ರೀತಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ರೀತಿಯ ಘೋಷಣೆಯನ್ನು ಕೂಗುವ ಮೂಲಕ ಜಾತವನ್ನು ಹಮ್ಮಿಕೊಳ್ಳಲಾಯಿತು. ಇದರಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕ ವೃಂದದವರು ಹಾಗೂ ಮಕ್ಕಳು ಭಾಗವಹಿಸಿದ್ದರು. ಜಾಥಾವು ನಮ್ಮ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡರ ಮನೆಯ ಹೊರಗೆ ತೆರಳಿ, ಅಲ್ಲಿಯೂ ಕೂಡ ಗಿಡವನ್ನು ನೆಡುವ ಮೂಲಕ ಅವರ ಮನೆಯ ತೋಟದಲ್ಲಿ ಇರುವ ವಿವಿಧ ರೀತಿಯ ಕೃಷಿಯ ಬೆಳೆಗಳ ಬಗ್ಗೆ ಅಮೂಲ್ಯ ಮಾಹಿತಿಯನ್ನು ನೀಡುವ ಮೂಲಕ ವಿಶ್ವ ಪರಿಸರ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ, ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತ ರಾಯ, ಸಹಶಿಕ್ಷಕರಾದ ವಿಕಾಸ್ ಕುಮಾರ್, ಅತಿಥಿ ಶಿಕ್ಷಕರಾದ ಲೋಕೇಶ್ವರಿ, ಗೌರವ ಶಿಕ್ಷಕರಾದ ಪ್ರಮೀಳಾ ಹಾಗೂ ನಿಶ್ಮಿತಾ ಹಾಗೂ ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು ಮತ್ತು ಪಾಲಕರು ಉಪಸ್ಥಿತರಿದ್ದರು.

Exit mobile version