ಅನುಗ್ರಹ ಕಾಲೇಜಿನಲ್ಲಿ ಪ್ರಾರಂಭೋತ್ಸವ

0

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ಸೇರ್ಪಡೆಗೊಂಡ ನೂತನ ವಿದ್ಯಾರ್ಥಿಗಳನ್ನು ಉದ್ಘಾಟನಾ ಕಾರ್ಯಕ್ರಮವು ಜೂ.2ರಂದು ಅನುಗ್ರಹ ಸಭಾಭವನದಲ್ಲಿ ಒರಗಿತು.
ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ! ಫಾ! ಜೇಮ್ಸ್ ಡಿ’ಸೋಜರವರು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಸರ್ವತೋಮುಖ ಬೆಳವಣಿಗೆಯಲ್ಲಿ ತಮ್ಮನ್ನು ತೋಡಗಿಸಿಕೊಂಡು ವ್ಯಕ್ತಿತ್ವ ವಿಕಸನಗೊಳಿಸಬೇಕು ಎಂದು ನೂತನ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂ!ಫಾ! ವಿಜಯ್ ಲೋಬೋ ಕಾಲೇಜಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ನೈತಿಕ ಹಾಗೂ ಮಾಲ್ಯಾಧಿರಿತ ಶಿಕ್ಷಣವು ವಿದ್ಯಾರ್ಥಿಗಳನ್ನು ಪರಿಪೂರ್ಣಗೋಳಿಸುತ್ತದೆ ಎಂದು ಹೇಳಿ ಶುಭಹಾರೈಸಿದರು. 2022-23ನೇ ಸಾಲಿನ ದ್ವಿತೀಯ ಪಿಯುಸಿ ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಕಾಲೇಜಿಗೆ ಶೇಕಡಾ 100 ಫಲಿತಾಂಶ ಬಂದಿರುವ ಬಗ್ಗೆ ಮೆಚ್ಚುಗೆ ಪಡಿಸಿದರು.
ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು, ಉಪನ್ಯಾಸಕಿ ಪ್ರೆಸಿಲ್ಲಾ ಡಿ’ಸೋಜ ಸ್ವಾಗತಿಸಿ, ಉಪನ್ಯಾಸಕ ಶ್ರೀ ಅರುಣ್ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here