ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಸಂಚಾಲಕರಿಗೆ ಸ್ವಾಗತ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜೂನ್ 5 ರಂದು ಶಾಲಾ ನೂತನ ಸಂಚಾಲಕರಾದ ಅತೀ ವಂ.ಫಾ.ವಾಲ್ಟರ್ ಓಸ್ವಲ್ಡ್ ಡಿಮೆಲ್ಲೋ ರವರನ್ನು ಸ್ವಾಗತಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ನೂತನ ಶಾಲಾ ಸಂಚಾಲಕರನ್ನು ಪರಿಚಯಿಸಿ, ವಿದ್ಯಾರ್ಥಿಗಳಿಗೆ ಶಾಲಾ ನಿಯಮಗಳನ್ನು ತಿಳಿಸಿದರು.

ಶಾಲಾ ನೂತನ ಸಂಚಾಲಕರಾದ ಅತೀ ವಂ ಫಾ ವಾಲ್ಟರ್ ಓಸ್ವಲ್ಡ್ ಡಿಮೆಲ್ಲೋರವರು ವಿದ್ಯಾರ್ಥಿಗಳು ಶಾಲಾ ನಿಯಮಗಳನ್ನು ಪಾಲಿಸುವುದರೊಂದಿಗೆ ವಿದ್ಯಾವಂತರಾಗಬೇಕೆಂದು ನುಡಿದು ಆಶೀರ್ವದಿಸಿದರು. ವಿದ್ಯಾರ್ಥಿನಿ ಸ್ವೀಡಲ್ ಪರಿಸರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು.

LEAVE A REPLY

Please enter your comment!
Please enter your name here