Site icon Suddi Belthangady

ಶಿಬಾಜೆ: ಬೂಡುದಮಕ್ಕಿ ಜಯ ಶೆಟ್ಟಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬೂಡುದಮಕ್ಕಿ ನಿವಾಸಿಯಾಗಿರುವ ಜಯ ಶೆಟ್ಟಿ ಇವರು ಮೇ.31 ರಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಹತ್ತಿರದ ಜಾಗವೊಂದರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಇವರು ಬಹುದಿನಗಳಿಂದ ಅನಾರೋಗ್ಯದ ಸಮಸ್ಯೆಯನ್ನು ಎದುರಿಸುತ್ತಿದ್ದರು ಜೀವನದಲ್ಲಿ ಜಿಗುಪ್ಸೆಗೊಂಡು ಇಂತಹ ನಿರ್ಧಾರ ತೆಗೆದುಕೊಂಡರು ಎಂದು ಹೇಳಲಾಗುತ್ತಿದೆ.

ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.

Exit mobile version