ಮಡಂತ್ಯಾರು: ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

0

ಮಡಂತ್ಯಾರು: ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ವಿದ್ಯಾರ್ಥಿಗಳು ವಿಶ್ವ ಪರಿಸರ ದಿನದಂದು ಕಿರು ನಾಟಕದ ಮೂಲಕ ಪರಿಸರ ಸಂರಕ್ಷಣೆಯಲ್ಲಿ ನಮ್ಮ ಜವಾಬ್ದಾರಿಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.ಪರಿಸರ ಗೀತೆಯನ್ನು ಹಾಡುವುದರ ಮೂಲಕ ಪರಿಸರ ಪ್ರೇಮ ಬೆಳೆಸುವಂತೆ ಪ್ರೇರೇಪಿಸಿದರು.ಪರಿಸರ ಸಂರಕ್ಷಣೆಗೆ ಸಂಬಂಧಪಟ್ಟ ಹಲವು ಘೋಷಣೆಗಳನ್ನು ಕೂಗಿ ಪರಿಸರದ ಮಹತ್ವವನ್ನು ಬಿಸ್ತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸರವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ನೆರವೇರಿಸಲು ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here