ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಜೂ 6 ರಂದು ಉಜಿರೆ ಶಾರದಾ ಮಂಟಪದಲ್ಲಿ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತು.


ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಇವರು ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು
ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪಿ. ಎಚ್. ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಶ್ರವಣ್ ಕುಮಾರ್ ನಿರೂಪಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.ಅಂಗನವಾಡಿ ಕಾರ್ಯಕರ್ತರು,ಆಶಾ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು

LEAVE A REPLY

Please enter your comment!
Please enter your name here