ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ,ಬೆಳ್ತಂಗಡಿ ಇಲ್ಲಿ ಆಚರಿಸಲಾಯಿತು.ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಪರಿಸರ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಆಂಗ್ಲ ಭಾಷಾ ಶಿಕ್ಷಕಿಯಾಗಿರುವ ಶ್ರೀಮತಿ ಮೋಹನಂಗಿ ತಿಳಿಸಿದರು.ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಆಮ್ಲ ಜನಕ ಪೂರೈಸುವ ಗಿಡಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷೀ ನಾರಾಯಣ ಕೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಹಾಸಿನಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸೇರಿರಿರುವ ಸರ್ವರಿಗೂ ಧನ್ಯವಾದ ಸಮರ್ಪಣೆಯನ್ನು ಜೆಸಿಐ ಬೆಳ್ತಂಗಡಿ ಕಾರ್ಯದರ್ಶಿ ಸುಧೀರ್ ಕೆ. ಎನ್ ನಡೆಸಿದರು.

ವಾಣಿ ಶಾಲೆಯ ಪ್ರಾರ್ಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here