





ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ), ಉಜಿರೆ. ವಿದ್ಯಾರ್ಥಿನಿಯಾದ ಅಮೃತಾ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನದ ಬಳಿಕ 622 ಅಂಕಗಳನ್ನು ಗಳಿಸಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡ ಸಂದರ್ಭದಲ್ಲಿ 621 ಅಂಕಗಳನ್ನು ಪಡೆದಿದ್ದ ಅಮೃತ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ 622 ಅಂಕಗಳನ್ನು ಪಡೆದುಕೊಂಡು ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.








