Site icon Suddi Belthangady

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲಿನಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಜರಗಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾ ಶ್ರೀನಿವಾಸ ಗೌಡರವರು ಮಾತನಾಡಿ, ಶಿಕ್ಷಣವೆಂದರೆ ಕೇವಲ ಪಾಠ ಪುಸ್ತಕ ಓದಿ, ಅಂಕ ಗಳಿಸುವುದು ಎಂದಲ್ಲ. ನಮ್ಮ ಮಾತು, ನಡೆಯ ಮೂಲಕ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವುದೂ ಅಷ್ಟೇ ಮುಖ್ಯ. ಜೊತೆಗೆ ಪರಿಸರದ ಬಗೆಗಿನ ತಿಳುವಳಿಕೆ, ಜಾಗೃತಿ ಇಂದಿನ ಅಗತ್ಯವಾಗಿದೆ. ವಿಶ್ವ ಪರಿಸರ ದಿನದ ಧ್ಯೇಯ ವಾಕ್ಯದಂತೆ “ಪ್ಲಾಸ್ಟಿಕ್ ನಿರ್ಮೂಲನೆ” ಯ ನಿಟ್ಟಿನಲ್ಲಿ ಎಲ್ಲರೂ ಕಟಿ ಬದ್ಧರಾಗೋಣ. ಪರಿಸರ ಮಾಲಿನ್ಯದ ಬಗ್ಗೆ ಜಾಗೃತರಾಗದೇ ಇದ್ದರೆ ಭವಿಷ್ಯದಲ್ಲಿ ಬದುಕೇ ಇಲ್ಲವಾದೀತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಈ ಸಂದರ್ಭಲ್ಲಿ ವಿದ್ಯಾರ್ಥಿಗಳಿಗೆ ಸ್ವರಚಿತ ಕವನ ವಾಚನ, ಪರಿಸರದ ಮಹತ್ವದ ಬಗ್ಗೆ ಭಾಷಣ, ಚಿತ್ರಕಲೆ, ಕವನ ಮತ್ತು ಪ್ರಬಂಧ ರಚನೆಯ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಮಾರ್ಗದರ್ಶಿ ಶಿಕ್ಷಕರಾದ ವಾರಿಜ ಎಸ್ ಗೌಡರು ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿಗಳಾದ ಮನೋಜ್ ಸ್ವಾಗತಿಸಿ, ವಿನ್ಯಾಸ್ ವಂದಿಸಿದರು.ಕೀರ್ತನಾ ಕಾರ್ಯಕ್ರಮ ನಿರೂಪಿಸಿದರು.

Exit mobile version