Site icon Suddi Belthangady

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಚಾಲಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್ ರವರು ” ಈ ಭೂಮಿ ನಮಗೆ ತಾಯಿ ಇದ್ದಂತೆ. ಮಾತೃ ಸಮಾನವಾದ ಪರಿಸರವನ್ನು ಉಳಿಸುವುದು ನಮ್ಮ ಜವಾಬ್ದಾರಿ. ಪರಿಸರ ಉಳಿದರೆ ನಾವು ಉಳಿಯುತ್ತೇವೆ.ಪರಿಸರ ನಾಶವಾದರೆ ನಮ್ಮ ನಾಶವೂ ಶತಸಿದ್ಧ” ಎಂದರು. ಪರಿಸರ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಪರಿಸರ ಗೀತೆ, ಚಿತ್ರಕಲೆ, ಪ್ರಬಂಧ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Exit mobile version