ಉಜಿರೆ: ಶ್ರೀ ಧ.ಮಂ.ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರದ ಸಮಾರೋಪ ಸಮಾರಂಭ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಲ್ಲಿ ಎಸ್.ಡಿ.ಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಆಯೋಜಿಸಿದ್ದ “ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆ ಮತ್ತು UPSC, KPSC, IBPS MAT, CAT ಪರೀಕ್ಷೆಗಳ ಕುರಿತು ಅರಿವು ಮೂಡಿಸುವ” ಎರಡು ದಿನದ ಕಾರ್ಯಾಗಾರ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು.ಉಪನ್ಯಾಸ ಕಾರ್ಯಕ್ರಮದಲ್ಲಿ ಒಟ್ಟು 356 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು.

ಸಂಪನ್ಮೂಲ ವ್ಯಕ್ತಿಗಳಾಗಿ ಸೃಷ್ಟಿ ಸಂಸ್ಥೆಯ ಧಾರವಾಡ ಇದರ ಮುಖ್ಯಸ್ಥರಾದ ಶ್ರೀ ಮಂಜುನಾಥ್ ಟಿ.ಎಂ ರವರು ಕೇಂದ್ರ ಮತ್ತು ರಾಜ್ಯ ಸರಕಾರದ ನೇಮಕಾತಿ ಪ್ರಕ್ರಿಯೆ ಉದ್ಯೋಗ ಕೌಶಲ್ಯಗಳು ಮತ್ತು ಅವಕಾಶಗಳು ವಿಚಾರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸೃಷ್ಟಿ ಅಕಾಡೆಮಿ ಧಾರವಾಡದಲ್ಲಿ ಉಪನ್ಯಾಸಕರು ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಸಚಿನ್ ರೆಡ್ಡಿ ಇವರು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮತ್ತು MAT, CAT, UPSC, IBPS ಮತ್ತು PGCT ಯಲ್ಲಿ Qutitative Aptitude ಪಾತ್ರ ಏನು ಮತ್ತು ಅದನ್ನು ಹೇಗೆ ಅಭ್ಯಾಸ ಮಾಡಬೇಕು ಎನ್ನುವ ಕುರಿತು ಪ್ರಾಯೋಗಿಕವಾಗಿ ವಿವರಿಸಿದರು.ಡಾ.ಎಂ.ಆರ್ ನಾಲ್ವಡಿಯವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಂಗ್ಲ ಭಾಷೆ ಮತ್ತು ಮನಃಶಾಸ್ತ್ರದ ಪಾತ್ರ ಮತ್ತು ಅವುಗಳ ಪ್ರಾಮುಖ್ಯತೆಯನ್ನು ಉದಾಹರಣೆ ಮೂಲಕ ವಿವರಿಸಿದರು.
ಶ್ರೀ ಸಚಿನ್ ಕುಮಾರ್ ಅವರು ವಿವಿಧ ರಾಜ್ಯ ಮತ್ತು ಕೇಂದ್ರ ಸರಕಾರದ ಪರೀಕ್ಷೆಗಳ ಪಠ್ಯ ಕ್ರಮ ಹೇಗಿದೆ ಎಂದು ತಿಳಿಸಿ ಪರೀಕ್ಷಾ ಪೂರ್ವ ಸಿದ್ಧತೆಯ ಬಗ್ಗೆ ವಿವರಿಸಿದರು.

ಈ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾಲೇಜಿನ ಪ್ರಾಂಶುಪಾಲ ಡಾ.ಕುಮಾರ ಹೆಗ್ಡೆ ಬಿ.ಎ ಅಧ್ಯಕ್ಷೀಯ ಭಾಷಣದಲ್ಲಿ ನಮ್ಮ ಕಾಲೀಜಿನಲ್ಲಿ ವಿದ್ಯಾರ್ಥಿಗಳ ಕೌಶಲ್ಯವೃದ್ಧಿಗಾಗಿ ಕೈಗೊಂಡ ಕ್ರಮಗಳನ್ನು ವಿವರಿಸಿ ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿತನುಡಿಗಳನ್ನು ಆಡಿದರು.ಮತ್ತು ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ ಹೆಗ್ಗಡೆ ಪ್ರಾಸ್ತಾವಿಕ ಭಾಷಣ ಮಾಡಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೌಶಲ್ಯದ ಅಗತ್ಯತೆ ವಿವರಿಸಿದರು.ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಡಾ.ನಾಗರಾಜ ಪೂಜಾರಿ ವಂದಿಸಿದರು.

ಡಾ.ನಾಗರಾಜ ಪೂಜಾರಿ, ಡಾ.ಹಂಪೇಶ್, ಆತ್ಮಿಕಾ ಮತ್ತು ಹರೀಶ್ ಶೆಟ್ಟಿಯವರ ತಂಡವು ಯಶಸ್ವಿಯಾಗಿ ತರಬೇತಿ ಕಾರ್ಯಾಗಾರನ್ನು ಸಂಘಟಿಸಿ ನಿರ್ವಹಣೆ ಮಾಡಿದರು.

LEAVE A REPLY

Please enter your comment!
Please enter your name here