ಸೈಂಟ್ ಪೀಟರ್ ಕ್ಲೇವರ್ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

0

ಅಳದಂಗಡಿ: ಜೂ.5ರಂದು ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಶಾಲಾ ಸಂಚಾಲಕರಾದ ವಂ.ಫಾ. ಎಲಿಯಾಸ್ ಡಿ ಸೋಜ ರವರು ಮಾತನಾಡಿ ಪ್ರತಿ ವಿದ್ಯಾರ್ಥಿಯು ಈ ದಿನ ಮನೆಯಲ್ಲಿ ಗಿಡವನ್ನು ನೆಡುವುದರ ಮುಖೇನ ಪರಿಸರವನ್ನು ಬೆಳೆಸುವುದರ ಜೊತೆಗೆ ನಮ್ಮ ಸುತ್ತ ಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಡಬೇಕೆಂದು ತಿಳಿಸಿದರು.

ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಸಿ.ಶೀಬಾ ಜೋಸೆಫ್ ಹಾಗೂ ಇಕೋ ಕ್ಲಬ್‌ನ ಶಿಕ್ಷಕಿ ಶ್ರೀಮತಿ ಲೀಲಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.10ನೇ ತರಗತಿ ವಿದ್ಯಾರ್ಥಿ ಅಖಿಲೇಶ್ ಪರಿಸರ ದಿನದ ಮಹತ್ವವನ್ನು ತಿಳಿಸಿದನು.ವಿಶ್ವ ಪರಿಸರ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.ಶಾಲಾ ವಠಾರದಲ್ಲಿ ಗಿಡವನ್ನು ನೆಡಲಾಯಿತು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ವಿದ್ಯಾರ್ಥಿನಿಯರಾದ ಕು. ನೈದಿಲೆ ನಿರ್ವಹಿಸಿದ ಈ ಕಾರ್ಯಕ್ರಮದಲ್ಲಿ ಕು.ಶ್ರೇಯಾ ಸ್ವಾಗತಿಸಿ, ಕು. ಲಿಯೋನ ಪಾಯ್ಸ ವಂದಿಸಿದರು.

LEAVE A REPLY

Please enter your comment!
Please enter your name here