ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಹರೀಶ್ ಪೂಂಜ ಅವರು ಕೆಲ ಹಿಂದೂ ಪರ ಸಂಘಟನೆಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ಸಿದ್ದರಾಮಯ್ಯ ಅವರಿಂದ ’24 ಹಿಂದೂ ಕಾರ್ಯಕರ್ತರ ಹತ್ಯೆ’ ಎಂಬ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಜೂ.9 ರಂದು ತಡೆ ವಿಧಿಸಿದೆ.
ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ.
ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ.ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.
p>