ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪರಶಿಷ್ಟ ಜಾತಿ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿಯನ್ನು ನೀಡಲು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 15 ರಿಂದ ಜುಲೈ 15ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಅರ್ಜಿದಾರರು
*ಅಭ್ಯರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
*ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2,50,000/- ಗಳನ್ನು ಮೀರಿರಬಾರದು.
*ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೆ ಅಭ್ಯರ್ಥಿಯ ಗರಿಷ್ಟ ವಯೋಮಿತಿಯು 40 ವರ್ಷ ಆಗಿರತಕ್ಕದ್ದು.
*ವಕೀಲ ವೃತ್ತಿಯನ್ನು ನಡೆಸಲು ಅರ್ಹರಾದ ಕಾನೂನು ಪದವಿಯನ್ನು ಪಾಸು ಮಾಡಿರತಕ್ಕದ್ದು. ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.
*ಅಪೂರ್ಣ ಅರ್ಜಿ, ತಡವಾಗಿ ಬಂದ ಅರ್ಜಿ ಮತ್ತು ನಿಬಂಧನೆಗಳನ್ನು ಪೂರೈಸದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಹ ಅರ್ಜಿಗಳ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ನಿಗದಿತ ಅರ್ಜಿ ನಮೂನೆಯೊಂದಿಗೆ ಅರ್ಜಿಯಲ್ಲಿ ಕೇಳಿರುವ ಎಲ್ಲಾ ಪ್ರಮಾಣ ಪತ್ರಗಳ ದೃಢೀಕರಣ ಪತ್ರಗಳನ್ನು ಲಗ್ತೀಕರಿಸಿರಬೇಕು.
*ದಕ್ಷಿಣ ಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ತರಬೇತಿಯ ವಿವರ:
ಈ ತರಬೇತಿಯ ಅವಧಿಯು 2 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳ ಮಾಹೆಯಾನ ರೂ.10,000/- ಶಿಷ್ಯ ವೇತನವನ್ನು ಈ ಅವಧಿಯಲ್ಲಿ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಆಯ್ಕೆ ಸಮಿತಿಯು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರಕಾರಿ ವಕೀಲರು ಅಥವಾ ಕನಿಷ್ಟ 15 ವರ್ಷಗಳ ವಕೀಲ ವೃತ್ತಿಯಲ್ಲಿ ಅನುಭವವುಳ್ಳ ವಕೀಲರ ಅಧೀನದಲ್ಲಿ ತರಬೇತಿಗೆ
ನಿಯೋಜಿಸಲಾಗುವುದು.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಯು ತಾವು ಆಯ್ಕೆಯಾದ 15 ದಿನದ ಒಳಗೆ ಅಂಗೀಕಾರವನ್ನು ನಿಗದಿತ ಸಮಯದೊಳಗೆ ತಿಳಿಸದಿದ್ದಲ್ಲಿ ಅವರ ಆಯ್ಕೆಯನ್ನು ರದ್ದುಪಡಿಸಲಾಗುವುದು ಹಾಗೂ ಇವರ ಬದಲಿಗೆ
ವೈಟಿಂಗ್ ಲಿಸ್ಟ್‌ನಲ್ಲಿರುವ ಬೇರೆ ಅರ್ಹ ಅಭ್ಯರ್ಥಿಗಳನ್ನು ಅರ್ಹತಗನುಸಾರವಾಗಿ ಆಯ್ಕೆ ಮಾಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಯು ತರಬೇತಿಗೆ ಹೋಗುವ ಮುಂಚೆ ತಾನು ಈ ತರಬೇತಿಯನ್ನು ಮಧ್ಯದಲ್ಲಿ ಬಿಟ್ಟು ಹೋಗುವುದಿಲ್ಲವೆಂದು ಹಾಗೂ ಈ ತರಬೇತಿಯನ್ನು ಮಧ್ಯದಲ್ಲಿ ಬಿಟ್ಟು ಹೋದಲ್ಲಿ ತರಬೇತಿಯ ಒಟ್ಟು ವೆಚ್ಚವನ್ನು ಹಾಗೂ ವೆಚ್ಚಕ್ಕೆ ಶೇ.10ರಂತೆ ಬಡ್ಡಿಯನ್ನು ಸರಕಾರಕ್ಕೆ ಪಾವತಿ ಮಾಡಲು ತಮ್ಮ ಒಪ್ಪಿಗೆ ಇರುತ್ತದೆ ಎಂಬುದಕ್ಕೆ ಮುಚ್ಚಳಿಕೆ ಪತ್ರವನ್ನು ಛಾಪಾ ಕಾಗದಲ್ಲಿ ಬರೆದು ಕೊಡಬೇಕಾಗುತ್ತದೆ.
ಸುಳ್ಳು ಮಾಹಿತಿ ಹಾಗೂ ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ ಅಭ್ಯರ್ಥಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.
ಆನ್‌ಲೈನ್ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು, ಪೂರಕ ದಾಖಲೆಗಳೊಂದಿಗೆ ಪರಿಶಿಷ್ಟ ಜಾತಿಯ ಆಭ್ಯರ್ಥಿಗಳಾಗಿದ್ದಲ್ಲಿ ಉಪನಿರ್ದೆಶಕರು, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಮಟ್ಟದ ಡಾ.ಬಿ,ಆರ್.ಅಂಬೇಡ್ಕರ್ ಭವನ, ಅಂಗಡಿಗುಡ್ಡೆ, ಉರ್ವಸ್ಟೋರ್, ದ.ಕ. ಮಂಗಳೂರು ಇವರಿಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವೆಬ್‌ಸೈಟ್ ವಿಳಾಸ: www.sw.kar.nic.in

p>

LEAVE A REPLY

Please enter your comment!
Please enter your name here