ಬೆಳ್ತಂಗಡಿ: ಸ.ಪ್ರ.ದ.ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

0

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ‍್ಸ್-ರೇಂಜರ‍್ಸ್ ಘಟಕ ಯುವರೆಡ್ ಕ್ರಾಸ್ ಘಟಕ ಹಾಗೂ ಎನ್‌ಸಿಸಿ ಇವುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಆವರಣವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಿಸಲು ಪ್ರತಿಜ್ಞೆ, ಮಾಡಲಾಯಿತು.

ಕಾಲೇಜಿನ ಆವರಣದಲ್ಲಿ ಪ್ರಾಂಶುಪಾಲರಾದ ಡಾ.ಸುಬ್ರಹ್ಮಣ್ಯ.ಕೆ ಇವರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗ್ರಂಥಪಾಲಕರಾದ ಪ್ರೊ.ಜಗದೀಶ್ ಎಸ್ ಇವರು ವಿಶ್ವ ಪರಿಸರ ದಿನಾಚರಣೆಯ ಆಶಯ ಪ್ಲಾಸ್ಟಿಕ್ ಮುಕ್ತ ಎಂಬ ವಿಷಯದ ಬಗ್ಗೆ ಮಾತನಾಡಿದರು.

ಪರಿಸರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಎಂಬ ವಿಷಯದ ಮೇಲೆ ಭಾಷಣ ಸ್ವರ್ಧೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ಸ್ವಾಗತಿಸಿದರು, ರೋವರ್ ಸ್ಕೌಟ್ ಲೀಡರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ರವಿ ಎಂ.ಎನ್. ಪ್ರಸ್ತಾವನೆಗೈದರು.ರೇಂಜರ್ ಲೀಡರ್ ಪ್ರೊ. ರಾಜೇಶ್ವರಿ ಹೆಚ್.ಎಸ್ ವಂದಿಸಿದರು, ಎನ್‌ಸಿಸಿ ಅಧಿಕಾರಿ ಡಾ.ಶೈಲೇಶ್ ಕುಮಾರ್ ಡಿ ಹೆಚ್ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here