ಪುದುವೆಟ್ಟು: ಜೂ.12.ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು.
ಪುದುವೆಟ್ಟು ಪೇಟೆಯಾದ್ಯಂತ ಶಾಲಾ ಮಕ್ಕಳಿಂದ ಭವ್ಯ ಮೆರವಣಿಗೆಯ ಮೂಲಕ ಬಾಲಕಾರ್ಮಿಕ ವಿರೋಧಿ ದಿನದ ಮಹತ್ವವನ್ನು ಸಾರಲಾಯಿತು.ಬಳಿಕ ಸಭಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಮಕ್ಕಳಿಂದ ಬಾಲಕಾರ್ಮಿಕ ವಿರೋಧಿ ದಿನದ ಪ್ರಯುಕ್ತ ಭಾಷಣವನ್ನು ಏರ್ಪಡಿಸಲಾಯಿತು.
ಶಾಲೆಯ ಶಿಕ್ಷಕ ಪವನ್ ಕುಮಾರ್ ಹಾಗೂ ಶಿಕ್ಷಕಿ ಶೀಲಾ ಎನ್ ರವರು ಬಾಲಕಾರ್ಮಿಕ ವಿರೋಧಿ ದಿನದ ಮಹತ್ವವನ್ನು ತಿಳಿಸಿದರು.ನಂತರ ಮಾತಾಡಿದ ಶೀನಪ್ಪಗೌಡರವರು ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸುವ ಉದ್ದೇಶವನ್ನು ಮಕ್ಕಳಿಗೆ ತಿಳಿಸಿದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವೇದಾವತಿ ಸ್ವಾಗತಿಸಿ, ನಿಶಾಂತ್ ಕುಮಾರ್ ಧನ್ಯವಾದವಿತ್ತರು. ಕಾರ್ಯಕ್ರಮವನ್ನುಪುಷ್ಪಲತಾ ರವರು ನಿರೂಪಿಸಿದರು.ಶಾಲೆಯ ಎಲ್ಲ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.