ಕುತ್ಲೂರು ಸ.ಉ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

0

ಕುತ್ಲೂರು: ಸರಕಾರಿ ಉನ್ನತೀಕರಿಸಿದ ಶಾಲೆ ಕುತ್ಲೂರು ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು.ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ ಉನ್ನತ ಹುದ್ದೆಯನ್ನು ಅಲಂಕರಿಸಿರುತ್ತಾರೆ.ನಮ್ಮ ಈ ಶಾಲೆಯ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ದೇಶದ ಉತ್ತಮ ಪ್ರಜೆಗಳಾಗಬೇಕೆಂದು ಶುಭ ಹಾರೈಸಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಭಟ್ ಕುಕ್ಕುಜೆ ಇವರು ಪುಸ್ತಕ ವಿತರಣೆ ಮಾಡಿದ ವಕೀಲರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಕುತ್ಲೂರು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸತೀಶ್ ಪಡಿವಾಳ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜ್ಯೋತಿ ಶಿವಣ್ಣ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸಂತೋಷ್ ಮತ್ತು ಪ್ರೇಮ, ವಕೀಲರ ಧರ್ಮಪತ್ನಿ ಮನೋರಮ ಭಟ್, ಮಕ್ಕಳಾದ ಮಯೂರ ಮತ್ತು ಮಂದಾರ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಸುಮನಾಜಿಯವರು ಸ್ವಾಗತಿಸಿದರು, ಶಿಲ್ಪಾರವರು ಧನ್ಯವಾದವಿತ್ತರು.ಶಾಲಾ ಮಕ್ಕಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here