ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಠ ಅರ್ಹತಾ ಪರೀಕ್ಷೆಯಾಗಿ ನಡೆಸಲಾಗುತ್ತದೆ.ಸರಕಾರವು ಪ್ರತೀ ವರ್ಷ KAR TET ಪರೀಕ್ಷೆಯನ್ನು ನಡೆಸಲು ಸಿದ್ಧತೆ ನಡೆಸಿದ್ದು, ಕೆಲವು ಸಮಯಗಳ ಹಿಂದೆ ಖಾಸಗೀ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಲೂ ಕೂಡ KAR TET ಪರೀಕ್ಷೆಯನ್ನು ಕಡ್ಡಾಯ ಮಾಡುವ ಮುನ್ಸೂಚನೆಯನ್ನು ನೀಡಿದ್ದನ್ನು ನಾವೆಲ್ಲರೂ ಗಮನಿಸಿದ್ದೇವೆ. ಈ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯು (TET) ಮಹತ್ವಪೂರ್ಣವಾಗಿದೆ.
ಈ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯೂ TET ಬರೆಯುವ ಶಿಕ್ಷಕರಿಗಾಗಿ ಆನ್ಲೈನ್ ತರಗತಿಯನ್ನು ನಡೆಸಲಿದೆ.ಕಳೆದ 3 ಸಾಲಿನ TET ಪರೀಕ್ಷೆಗಳಲ್ಲಿ 70ಕ್ಕೂ ಮಿಕ್ಕಿದ ಅಭ್ಯರ್ಥಿಗಳು ಉತ್ತಮ ಅಂಕಗಳೊಂದಿಗೆ, TET ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿರುತ್ತಾರೆ. ಅಲ್ಲದೇ 2022-23 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (GPSTR) ಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ 5 ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ.
KAR TET ಪರೀಕ್ಷೆಗೆ ಪೂರ್ವ ತಯಾರಿಯನ್ನು ನಡೆಸುವ ಅಭ್ಯರ್ಥಿಗಳು ಆನ್ಲೈನ್ ತರಗತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.ಆನ್ಲೈನ್ ತರಗತಿಗಳು ಪ್ರತಿದಿನ ರಾತ್ರಿ 08 ರಿಂದ 09ರವರೆಗೆ (ದಿನದಲ್ಲಿ ಒಂದು ಗಂಟೆ) ಕನ್ನಡ, ಇಂಗ್ಲೀಷ್, ಹಿಂದಿ, ಶಿಶು ವಿಕಸನ ಮತ್ತು ಬೋಧನಾ ಕ್ರಮ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ನುರಿತ ತರಬೇತುದಾರರಿಂದ ತರಬೇತಿಯನ್ನು ನೀಡಲು ತೀರ್ಮಾನಿಸಿದ್ದು ತರಬೇತಿಯು ಜೂ.21 ರಿಂದ ಪ್ರಾರಂಭವಾಗಲಿದೆ.ಆಸಕ್ತರು 9620468869 ಮೊಬೈಲ್ ಸಂಖ್ಯೆಗೆ ಕರೆಮಾಡಿ ಪ್ರವೇಶಾತಿ ಪಡೆದುಕೊಳ್ಳಬಹುದು.ಇಲ್ಲವೇ ನೇರವಾಗಿ ಹಿಂದೂಸ್ತಾನ್ ಕಾಂಪ್ಲೆಕ್ಸ್, ಎಪಿಯಂಸಿ ರಸ್ತೆ, ಸಿಟಿ ಆಸ್ಪತ್ರೆ ಬಳಿಯ ವಿದ್ಯಾಮಾತಾ ಕಛೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.