

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ ಶ್ರೀ ಧ.ಮ.ಕಲಾಭವನದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್ ಇವರ ಅಧ್ಯಕ್ಷತೆಯಲ್ಲಿ ಜೂ.16ರಂದು ಜರಗಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಸುರೇಶ್ ಕುಮಾರ್, ತಾಪಂ ಇಒ ಕುಸುಮಾಧರ ಬಿ, ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ಸಹಾಯಕ ಸ್ಟೀಫನ್ ಹಾಗೂ ಇತರ ಅಧಿಕಾರಿಗಳ ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿಯವರು ತಾಲೂಕಿನ 48 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಆಯ್ಕೆ ಬಗ್ಗೆ ಮಾಹಿತಿ ನೀಡಿದರು.
ವಿವಿಧ ಗ್ರಾಮ ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.