Site icon Suddi Belthangady

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ- ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು- ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು ಬಿಡುಗಡೆ

ಬೆಳ್ತಂಗಡಿ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ (17) ಅವರನ್ನು ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣ 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್.16 ರಂದು(ಇಂದು) ತೀರ್ಪು ಪ್ರಕಟವಾಗಿದ್ದು, ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು ಬಿಡುಗಡೆಗೊಳಿಸಿದೆ.

ಸಾಕ್ಷ್ಯಾಧಾರ ಕೊರತೆ ಹಿನ್ನಲೆ ಆರೋಪಿ ಸಂತೋಷ್ ರಾವ್ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.ಪ್ರಕರಣದ ಆರೋಪಿಯಾಗಿದ್ದ ಸಂತೋಷ್ ರಾವ್ ಪ್ರಕರಣದಿಂದ ದೋಷಮುಕ್ತ ಎಂದು ಸಿಬಿಐ ನ್ಯಾಯಾಧೀಶ ಸಂತೋಷ್ ಸಿ.ಬಿ ಆದೇಶ ಮಾಡಿದ್ದಾರೆ.

Exit mobile version