Site icon Suddi Belthangady

ನಿಟ್ಟಡೆ ಕುಂಭಶ್ರೀ ವಿದ್ಯಾ ಸಂಸ್ಥೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

ನಿಟ್ಟಡೆ: ನಿಟ್ಟಡೆ ಕುಂಭ ಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್ ಹಾಗೂ ಸಮನ್ವಯಾಧಿಕಾರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಶಂಭುಶಂಕರ್ ಜೂ.15 ರಂದು ಭೇಟಿ ನೀಡಿದರು.

ಸತತ 10ನೇ ಬಾರಿ ಎಸ್ ಎಸ್ ಎಲ್ ಸಿ ಹಾಗೂ 2ನೇ ಬಾರಿ ದ್ವಿತೀಯ ಪಿಯುಸಿ ಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಈ ಸಾಧನೆಯನ್ನು ಅಭಿನಂದಿಸುವ ಸಲುವಾಗಿ ಸಂಸ್ಥೆಗೆ ಆಗಮಿಸಿದರು.

100% ಫಲಿತಾಂಶ ಬರುವಲ್ಲಿ ಶ್ರಮ ವಹಿಸಿದ ವಿದ್ಯಾರ್ಥಿಗಳನ್ನು, ಶಾಲಾಮುಖ್ಯ ಶಿಕ್ಷಕಿ- ಶಿಕ್ಷಕರನ್ನು ಹಾಗೂ ಸಂಸ್ಥೆಯ ಮುಖ್ಯಸ್ಥರಿಗೆ ಅಭಿನಂದಿಸಿದರು.ಈ ಬಾರಿಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಜೊತೆ ಮಾತನಾಡಿ, ಪರೀಕ್ಷಾ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳಲ್ಲಿರುವ ಶಿಸ್ತು, ನಡವಳಿಕೆ, ಹಾಗೂ ಸಂಸ್ಥೆಯಲ್ಲಿ ಸಿಗುವ ಸಂಸ್ಕಾರಯುತ ಶಿಕ್ಷಣವನ್ನು ಶ್ಲಾಘಿಸಿದರು.

ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್, ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಶಿಕ್ಷಕವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version