

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಸಮೀಪದ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಬಿದ್ದ ಘಟನೆ ಜೂ.17ರಂದು ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಗಾಯವಾಗಿದ್ದು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಬೆಂಗಳೂರಿನ ಮೂಲದವರು ಧರ್ಮಸ್ಥಳಕ್ಕೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ.