Site icon Suddi Belthangady

ಪಟ್ರಮೆ: ಗ್ರಾಮ ಸಭೆ

ಪಟ್ರಮೆ: ಪಟ್ರಮೆ ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷೆ ಮೋಹಿಣಿ ಇವರ ಅಧ್ಯಕ್ಷತೆಯಲ್ಲಿ ಪಟ್ರಮೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ.17 ರಂದು ನಡೆಯಿತು.

ನೋಡಲ್ ಅಧಿಕಾರಿಯಾಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಅವರು ನೋಡೆಲ್ ಅಧಿಕಾರಿಯಾಗಿ ಆಗಮಿಸಿದ್ದರು.ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ,ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ಪಶು ಸಂಗೋಪನಾ ಇಲಾಖೆ , ಪೋಲೀಸ್ ಇಲಾಖೆ ಅವರು ಆಗಮಿಸಿದ್ದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯತೀಶ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಮನೋಜ್, ಮೀನಾ ಕುಮಾರಿ, ಗಿರಿಜಾ ಉಪಸ್ಥಿತರಿದ್ದರು.
ಪಿಡಿಒ ರೀತೇಶ್ ಪುತ್ರನ್ ಸ್ವಾಗತಿಸಿ, ಗ್ರಾ.ಪಂ ಸದಸ್ಯ ರಾಜೇಶ್ ರೈ ವಂದಿಸಿದರು.

ಸಭೆಯಲ್ಲಿ ಗ್ರಾಮಸ್ಥರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ನೆರೆದಿದ್ದರು.

Exit mobile version