ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಶಿಶಿಲ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಹೆಲ್ತ್‌ ಪ್ರಮೋಷನ್‌ ಟ್ರಸ್ಟ್‌ ಸಹಯೋಗದಲ್ಲಿ ಗ್ರಾಮ ಪಂಚಾಯತು ಆರೋಗ್ಯ ಅಮೃತ ಅಭಿಯಾನದಡಿ ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮ ಪಂಚಾಯತು ನಲ್ಲಿ ಜೂ.19ರಂದು ಪೂರ್ವಾಹ್ನ 10.30 ಗಂಟೆಗೆ ಸರಿಯಾಗಿ ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೋಂದಾಯಿತ ಉದ್ಯೋಗ ಚೀಟಿ, ಹೊಂದಿರುವ ಕೂಲಿಕಾರರಿಗೆ ಮತ್ತು ಇತರ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಗುವುದು.

ಎಲ್ಲಾ ನರೇಗಾ ಕೂಲಿಕಾರರು ಬರುವಾಗ ತಮ್ಮ ಉದ್ಯೋಗ ಚೀಟಿ ಯನ್ನು ತರುವುದು.

ಎಲ್ಲಾ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಗ್ರಾಮ ಪಂಚಾಯತ್ ಶಿಶಿಲ ವತಿಯಿಂದ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here