Site icon Suddi Belthangady

ಬೆಳ್ತಂಗಡಿ: ಚಾರ್ಮಾಡಿ ಯುವಕರಿಂದ ಸರಕಾರಿ ಬಸ್ ನಿಲ್ಲಿಸಿ ಗಲಾಟೆ ಪ್ರಕರಣ- ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂನ್ 18 ರಂದು ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಕರಣದಲ್ಲಿ ಭಾಗಿಯಾದ ಮೂರು ಜನ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ಅಬೂಬಕ್ಕರ್ ಅವರ ಮಗ ಮಹಮ್ಮದ್ ಶಬೀರ್(21) ,ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ಅಬೂಬಕ್ಕರ್ ಅವರ ಮಗ ಮಹಮ್ಮದ್ ಮಹಾರೂಫ್(22) , ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಪಾಂಡಿಕಟ್ಟೆ ನಿವಾಸಿ ಮೊಹಮ್ಮದ್ ಅವರ ಮಗ ಮಹಮ್ಮದ್ ಮುಬಶೀರ್ (23) ಎಂಬವರನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದ ತಂಡ ಜೂನ್ 18 ರಂದು ರಾತ್ರಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಪ್ರಕರಣದಲ್ಲಿ ಭಾಗಿಯಾದ ಉಳಿದ ಆರೋಪಿಗಳಿಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Exit mobile version