ಧರ್ಮಸ್ಥಳ: ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರ 4 ನೇ ವರ್ಷದ “ಚಾತುರ್ಮಾಸ್ಯ ವ್ರತಾರಂಭ” ಜು.03 ರಿಂದ ಪ್ರಾರಂಭವಾಗಿ ಆ.31 ರ ವರೆಗೆ ಶ್ರೀಗುರುದೇವ ಮಠದಲ್ಲಿ ನಡೆಯಲಿರುವುದು.
ಎರಡು ತಿಂಗಳ ವರಗ ನಡೆಯಲಿರುವ ಈ ಪವಿತ್ರವಾದ ಲೋಕ ಕಲ್ಯಾಣದ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಭಕ್ತರ ಸಮಾಲೋಚನಾ ಸಭೆ ಜೂ.20 ರಂದು ಶ್ರೀರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಸಭೆಯಲ್ಲಿ ಈ ವರ್ಷ ಚಾತುರ್ಮಾಸ್ಯ ಆಚರಿಸುವ ಬಗ್ಗೆ ಚರ್ಚಿಸಲಾಯಿತು.
ಶಾಸಕ ಹರೀಶ್ ಪೂಂಜ, ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ತಾಲೂಕು ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಪ್ರಧಾನ ಸಂಚಾಲಕ ಜಯಂತ ಕೋಟ್ಯಾನ್, ವಿಶ್ವ ಹಿಂದೂ ಪರಿಷತ್ ಪ್ರಮುಖರಾದ ಭಾಸ್ಕರ ಧರ್ಮಸ್ಥಳ, ತಿಮ್ಮಪ್ಪ ಗೌಡ ಬೆಳಾಲು, ಯುವವಾಹಿನಿ ಬೆಳ್ತಂಗಡಿ ಘಟಕದ ಪ್ರಧಾನ ಕಾರ್ಯದರ್ಶಿ ಸುನೀಲ್ ಕನ್ಯಾಡಿ, ವಿವಿಧ ಗ್ರಾಮಗಳ ಪ್ರಮುಖರು, ಶ್ರೀ ರಾಮ ಕ್ಷೇತ್ರ ಗ್ರಾಮ ಸಮಿತಿಗಳ ಪದಾಧಿಕಾರಿಗಳು, ಸಿಬ್ಬಂದಿಗಳು, ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.
ಟ್ರಸ್ಟಿ ತುಕಾರಾಮ ಸಾಲಿಯಾನ್ ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು.