

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ ಹಾಗೂ ಸಂಘದ ಕಾರ್ಯವ್ಯಾಪ್ತಿಯ ಎನ್.ಸಿ.ಎಸ್.ನೊಂದಾಯಿತ ರೈತಾಪಿ ಸದಸ್ಯರಿಗೆ ಉಚಿತವಾಗಿ ಮೈಲುತುತ್ತು ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ ಜೂ.21 ರಂದು ಸಹಕಾರಿ ಸಭಾ ಭವನದಲ್ಲಿ ನಡೆಯಲಿದೆ.
ನೂತನ ಕಟ್ಟಡದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹಾಗೂ ಬೆಳ್ತಂಗಡಿ ತಾಲೂಕು ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಗೌರವ ಉಪಸ್ಥಿತರಾಗಿ ಕರ್ನಾಟಕ ಸರಕಾರ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ನಿರಂಜನ್ ಬಾವಂತಬೆಟ್ಟು, ಪುತ್ತೂರು ವಿಭಾಗ ಸಹಕಾರಿ ಸಂಘಗಳ ಉಪ-ನಿಬಂಧಕರಾದ ತ್ರಿವೇಣಿ ರಾವ್, ಬೆಳ್ತಂಗಡಿ ಸಹಕಾರಿ ಸಂಘಗಳ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷೆ ಸುಭಾಷಿಣಿ ಕೆ, ಕುವೆಟ್ಟು ಗ್ರಾಮ ಪಂಚಾಯತು ಅಧ್ಯಕ್ಷೆ ಆಶಾಲತಾ ಉಪಸ್ಥಿತರಿರುತ್ತಾರೆ.ಸಂಘದ ಸಂಘದ ಉಪಾಧ್ಯಕ್ಷರು, ನಿರ್ದೇಶಕರು,ಸಿಬ್ಬಂದಿಗಳು ಮತ್ತು ಸಂಘದ ಸರ್ವ ಸದಸ್ಯರು ಬಾಗವಹಿಸುವರು.
ಈ ಸಂದರ್ಭದಲ್ಲಿ 2 ನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ, ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ ಜರುಗಲಿದೆ.