ಮುಂಡಾಜೆ ಕಾಲೇಜಿನಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

0

ಮುಂಡಾಜೆ: ವಿವೇಕಾನಂದ ಮುಂಡಾಜೆ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಜೂ.20ರಂದು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ ಆಪ್ತ ಸಮಾಲೋಚಕರು ಆಗಿರುವ ರಮ್ಯ ಇವರು ಜಾಗೃತಿ ಕಾರ್ಯಕ್ರಮ ನೆರವೇರಿಸಿಕೊಟ್ಟರು.ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ರೂಪ ಲತಾ ಇವರು ಸಹಕರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಡಿಸೋಜಾ ಇವರು ವಹಿಸಿಕೊಂಡರು.

ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ವಿಭಾಗದ ಸಂಯೋಜಕರಾಗಿರುವ ಪುರುಷೋತ್ತಮ ಶೆಟ್ಟಿ ಇವರು ಕಾರ್ಯಕ್ರಮವನ್ನು ಸಂಘಟಿಸಿದರು.ಉಪನ್ಯಾಸಕಿ ನಮಿತಾ ವಂದಿಸಿದರು.

LEAVE A REPLY

Please enter your comment!
Please enter your name here