ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

0

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರಗಿತು.ಜೂ.18ರಂದು ಶಾಲಾ ಸಭಾಂಗಣದಲ್ಲಿ 2022-23 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಅಮೋಘ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಶಾಲಾ ಸೇವಾ ಸಮಿತಿ ಹಾಗೂ ಶಿಕ್ಷಕ ವೃಂದ ಶುಭ ಹಾರೈಸಿ ಅಭಿನಂದಿಸಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹೆತ್ತವರು, ಶಿಕ್ಷಕ ವೃಂದದವರು ಮತ್ತು ಸೇವಾ ಸಮಿತಿಯವರು ಹಾಜರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶೋಭಿತ.ಕೆ.ಆರ್ ಇವರು ಎಲ್ಲರನ್ನೂ ಸ್ವಾಗತಿಸಿದರು.ಸಹ ಶಿಕ್ಷಕಿ ಜಯಶ್ರೀ ವಂದಿಸಿದರು ಹಾಗೂ ಶಿಕ್ಷಕಿ ಪೂರ್ಣಿಮಾ ಇವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here