

ಪುದುವೆಟ್ಟು: ಜೂ.20ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಯೋಗ ತರಬೇತಿ ಶಿಬಿರವನ್ನು ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ತರಬೇತುದಾರರಾಗಿ ಸಿ.ಎನ್.ವೈ.ಎಸ್ ಕಾಲೇಜಿನ ವಿದ್ಯಾರ್ಥಿಗಳಾದ ರೋಷನಿ ಮತ್ತು ಸುಕಿತ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ವಹಿಸಿಕೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶೀನಪ್ಪಗೌಡರವರು ಯೋಗ ತರಬೇತಿಯಿಂದ ವಿದ್ಯಾರ್ಥಿಗಳಲ್ಲಿ ಭೌತಿಕ ಮತ್ತು ಮಾನಸಿಕ ಬೆಳವಣಿಗೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಶಾಲೆಯ ಎಲ್ಲ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.