ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಜೂ.21ರಂದು ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಎಂಜಿನಿಯರಿಂಗ್ ಇಲಾಖೆಯ ಹಿರಿಯ ಸಹಾಯಕ ಸುಜಿತ್ ಮಾರ್ಗದರ್ಶ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕವಿತಾ,ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ ಸ್ವಾಗತಿಸಿದರು, ಅನುಪಾಲನಾ ವರದಿ, ಲೆಕ್ಕ ಪತ್ರವನ್ನು ಕಾರ್ಯದರ್ಶಿ ತಾರನಾಥ ನಾಯ್ಕ ವಾಚಿಸಿದರು.ಸಿಬ್ಬಂದಿಗಳು ಸಹಕರಿಸಿದರು.

ಸಭೆಯಲ್ಲಿ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಓದಿ ಅನುಮೋದನೆ ಪಡೆಯಲಾಯಿತು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here