ಪುದುವೆಟ್ಟು ಶ್ರೀ.ಧ.ಮಂ.ಅ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪುದುವೆಟ್ಟು: ಜೂ.21ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದಂತಹ ಸ್ಥಳೀಯ ರಮೇಶ್ ರಾವ್ ರವರು, ಯೋಗ ತರಬೇತಿಯನ್ನು ನಡೆಸಿಕೊಟ್ಟ ಕುಮಾರಿ ರೋಷನಿ ಮತ್ತು ಕುಮಾರಿ ಸುಕಿತ ರವರು ಉಪಸ್ಥಿತರಿದ್ದರು.ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ರಮೇಶ್ ರಾವ್ ರವರು ನಮ್ಮ ದೈನಂದಿನ ಚಟುವಟಿಕೆಯಲ್ಲಿ ಯೋಗವು ಬಹಳ ಪ್ರಾಮುಖ್ಯತೆಯನ್ನು ವಹಿಸುತ್ತವೆ.ಯೋಗದಿಂದ ಮನಸ್ಸಿಗೆ ಶಾಂತಿ ನೆಮ್ಮದಿ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ರೋಷನಿ ಅವರು ನಾವು ಎರಡು ದಿನದಿಂದ ನೀಡಿದ ಯೋಗ ತರಬೇತಿಯಲ್ಲಿ ಎಲ್ಲ ವಿದ್ಯಾರ್ಥಿಗಳು ಕೂಡ ಸಕ್ರಿಯವಾಗಿ ಭಾಗವಹಿಸಿದ್ದೀರಿ, ನಾವು ಕಲಿಸಿಕೊಟ್ಟಂತಹ ಯೋಗವನ್ನು ಈ ದಿನಕ್ಕೆ ಮಾತ್ರ ಸೀಮಿತಗೊಳಿಸದೆ ಪ್ರತೀ ದಿನ ಅಭ್ಯಾಸ ಮಾಡುವಂತೆ ಆಗಬೇಕು ಎಂದು ತಿಳಿಸಿದರು.

ಶಾಲಾ ಶಿಕ್ಷಕಿ ಸುಜಾತಾ ರವರು ಮಾತನಾಡಿ ಯೋಗ ದಿನದ ಮಹತ್ವ, ಹಿನ್ನಲೆ ಮತ್ತು ಯೋಗದಿಂದ ಆಗುವಂತಹ ಪ್ರಯೋಜನಗಳನ್ನು ಮಕ್ಕಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತೇಜಾವತಿಯವರು ಯೋಗವು ದೇಹ ಮತ್ತು ಮನಸ್ಸಿಗೆ ಸೂಕ್ತವಾದ ವ್ಯಾಯಾಮವಾಗಿದೆ, ದೇಹವನ್ನು ಸದೃಢವಾಗಿ ಮತ್ತು ಆರೋಗ್ಯಕರವಾಗಿಡಲು ಯೋಗ ಸಹಕಾರಿಯಾಗಿದೆ ಎಂದು ತಿಳಿಸಿದರು.ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶೀಲಾ.ಎನ್ ರವರು ಸ್ವಾಗತಿಸಿ, ವೇದಾವತಿ ಅವರು ಧನ್ಯವಾದಗೈದ ಕಾರ್ಯಕ್ರಮವನ್ನು, ಪುಷ್ಪಲತಾ ರವರು ನಿರೂಪಿಸಿದರು.

ಶಾಲೆ ಎಲ್ಲ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು

p>

LEAVE A REPLY

Please enter your comment!
Please enter your name here