ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನೆರವೇರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂ|ಸ್ವಾ|ಡಾ| ಸ್ಟ್ಯಾನಿ ಗೋವಿಯಸ್, ಶಾಲಾ ಮುಖೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ, ಯೋಗ ತರಬೇತುದರರಾದ ಕುಮಾರಿ ಶ್ರೀಶ ಶೆಟ್ಟಿ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ವಿದ್ಯಾರ್ಥಿನಿಯಾದ ಕುಮಾರಿ ಅನ್ಯ ಜೈನ್ ರವರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ವಿವರಣೆ ನೀಡಿದರು. ಶಾಲಾ ಸಂಚಾಲಕರಾದ ವಂ|ಸ್ವಾ|ಡಾ| ಸ್ಟ್ಯಾನಿ ಗೋವಿಯಸ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ದೈಹಿಕ ಚಟುವಟಿಕೆಗಳು ದೇಹಕ್ಕೆ ಪೂರಕವಾದರೆ ಯೋಗವು ಮಾನಸಿಕ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯವನ್ನು ಕೋರಿದರು.ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯ ಉಜಿರೆ ಇಲ್ಲಿಯ ವಿದ್ಯಾರ್ಥಿನಿಯಾದ ಕುಮಾರಿ ಶ್ರೀಶ ಶೆಟ್ಟಿರವರು ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿದರು. ವಿದ್ಯಾರ್ಥಿನಿಯರಾದ ಕುಮಾರಿ ಜೋಸ್ಲಿನ್ ರವರು ಕಾರ್ಯಕ್ರಮವನ್ನು ನಿರೂಪಿಸಿ, ಕುಮಾರಿ ಜೋಷ್ಮರವರು ಸ್ವಾಗತಿಸಿ, ಕುಮಾರಿ ಶ್ರೀಲಕ್ಷ್ಮಿ ರವರು ಧನ್ಯವಾದವನ್ನು ಸಮರ್ಪಿಸಿದರು.ಈ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಸಹಕರಿಸಿದರು.