ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜೂ.21ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿನಿಯರಾದ ರೀಶೆಲ್ ಬೆನ್ನಿಸ್ ಹಾಗೂ ಅಲ್ರಿಯಾ ಡಿಸೋಜ ವಿಶ್ವ ಯೋಗ ದಿನಾಚರಣೆಯ ಮಹತ್ವ ಹಾಗೂ ಯೋಗದ ಪ್ರಯೋಜನಗಳನ್ನು ತಿಳಿಸಿದರು.ಲಘು ವ್ಯಾಯಾಮ, ಪ್ರಾಣಾಯಾಮ, ಸೂರ್ಯ ನಮಸ್ಕಾರದ ಜೊತೆಗೆ ಹಲವು ಆಸನಗಳನ್ನು ವಿದ್ಯಾರ್ಥಿಗಳು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಟ್ಟರು.
ಶಾಲಾ ಮುಖ್ಯೋಪಾಧ್ಯಾಯರಾದ ವಂ.ಫಾ ಕ್ಲಿಫರ್ಡ್ ಪಿಂಟೋರವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.ಸಹಶಿಕ್ಷಕಿ ಪ್ರೀತಾ ಡಿಸೋಜ ಕಾರ್ಯಕ್ರಮ ನಿರ್ವಹಿಸಿದರು.ದೈಹಿಕ ಶಿಕ್ಷಣ ತರಬೇತುದಾರ ಶರತ್ ಪಿಂಟೋ ಸಹಕರಿಸಿದರು.