ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ.ಆರ್ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿ ಪ್ರತೀ ನಿತ್ಯ ಜೀವನದಲ್ಲಿ ಯೋಗ ಅಳವಡಿಕೆ ಹಾಗೂ ಅದರಿಂದ ಸಿಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.ನಂತರ ಪ್ರೌಡ ಶಾಲಾ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಹಾಗೂ ಇತರೆ ಹಲವು ಯೋಗಾಸನ ಪ್ರದರ್ಶಿಸುವ ಮೂಲಕ ಕಾರ್ಯಕ್ರಮ ಯಶಸ್ಸು ಗೊಳಿಸಿದರು.
ಕಾರ್ಯಕ್ರಮದಲ್ಲಿ ಕು.ಶರಣ್ಯ, 9 ನೇ ತರಗತಿ, ಎಲ್ಲರನ್ನೂ ಸ್ವಾಗತಿಸಿದರು.ಕು.ಹುನೈದ 9 ನೇ ತರಗತಿ ವಂದನಾರ್ಪಣೆ ಸಲ್ಲಿಸಿದರು.ಕು.ಅನೂಜ್ಞಾ ಸಾಲಿಯಾನ್ 10ನೇ ತರಗತಿ ಇವರು ಕಾರ್ಯಕ್ರಮ ವನ್ನು ನಿರೂಪಿಸಿದರು