

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರ ಅಧ್ಯಕ್ಷತೆಯಲ್ಲಿ ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಭಾಗವಹಿಸಿ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ ಹೆಗ್ಡೆ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ, ಗ್ರಾಮ ಪಂಚಾಯತ್ ಅಭವೃದ್ಧಿ ಅಧಿಕಾರಿ ಸುಧಾಕರ್ ಡಿ., ಕಾರ್ಯದರ್ಶಿ ಯೋಗಿಣಿ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಇಲಾಖಾ ಅಧಿಕಾರಿ, ಸಿಬಂದಿ ವರ್ಗ ಉಪಸ್ಥಿತರಿದ್ದರು.ಗ್ರಾಮ ಪಂಚಾಯತ್ ಸಿಬ್ಬಂದಿ ಸತೀಶ್ ಕಳೆದ ಸಭೆಯ ನಡಾವಳಿ, ವಾರ್ಡ್ ಸಬೆಯ ನಡಾವಳಿ, ಜಮಾಖರ್ಚಿನ ವಿವರ ನೀಡಿದರು. ವಿವಿಧ ಇಲಾಖಾ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.