ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲೆ ಜಾಲಿ ಓ.ಎ ಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ, ‘ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಧ್ಯಾತ್ಮಿಕವಾಗಿಯೂ, ವೈಜ್ಞಾನಿಕವಾಗಿಯೂ ಉಪಯುಕ್ತವಾದ ಯೋಗವು ದೈಹಿಕ ಮಾನಸಿಕ ಆರೋಗ್ಯ ವೃದ್ಧಿಗೆ ಅತ್ಯಗತ್ಯ.ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ನೆನಪಿನ ಶಕ್ತಿ ವೃದ್ಧಿ, ಒತ್ತಡ ನಿವಾರಣೆಗೆ ಇದು ಸಹಕಾರಿಯಾಗಿದೆ ಎಂದು ನುಡಿದರು.ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ನಮಿತಾ.ಕೆ.ಆರ್ ಕಾರ್ಯಕ್ರಮವನ್ನು ನಿರೂಪಿಸಿ, ಸಹ ಕಾರ್ಯಕ್ರಮಾಧಿಕಾರಿ ಸಂದೀಪ್ ಐ ವಂದನಾರ್ಪಣೆಗೈದರು.ತದನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ನಡೆಸಲಾಯಿತು.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋವರ್ಸ್ ರೇಂಜರ್ಸ್ ವಿಭಾಗ ಸಹಭಾಗಿತ್ವ ವಹಿಸಿದ್ದವು