Site icon Suddi Belthangady

ನಾರಾವಿ ಗ್ರಾ.ಪಂನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ

ಸುಲ್ಕೇರಿ: ಜೂ.21ರಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷರು ಉದಯ ಕುಮಾರ್ ಹೆಗ್ಡೆ ಮತ್ತು ಗ್ರಾ.ಪಂ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಸುಧಾಕರ್, ಸಮುದಾಯ ಆರೋಗ್ಯ ಅಧಿಕಾರಿ ಸುನೀತಾ ಮತ್ತು ಕು. ಸ್ವಾತಿ, ಪಿ.ಎಚ್.ಸಿ.ಒ ಶಕುಂತಲಾ, ಆಶಾ ಕಾರ್ಯಕರ್ತೆ ಚಂದ್ರಾವತಿ, ಅಮೃತ್ ಆರೋಗ್ಯ ಅಭಿಯಾನದ ತಾಲೂಕು ಸಂಯೋಜಕರು ಮಮತಾ ರೈ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version