Site icon Suddi Belthangady

ಪುದುವೆಟ್ಟು ಶ್ರೀ.ಧ.ಮಂ.ಅ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಜೂ.22ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯರಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ವತಿಯಿಂದ ಕೊಡಮಾಡುವ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಸತೀಶ್ಚಂದ್ರ ಸರ್ ಅವರು ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಯಾಗಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸೋಮಶೇಖರ್ , ಎಸ್.ಡಿ.ಎಮ್ ಉಜಿರೆಯ ಪರ್ಚೇಸ್ ಆಫೀಸರ್ ಆದ ಶ್ರೀಶೈಲೇಶ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್, ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಉಪಸ್ಥಿತರಿದ್ದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸೋಮಶೇಖರ್ ಅವರು ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣದ ಜೊತೆಗೆ ಅರ್ಹ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವಂತೆ ಬರವಣಿಗೆ ಪುಸ್ತಕಗಳನ್ನು ಉಚಿತವಾಗಿ ಹಾಗೂ ಇತರ ಸೌಲಭ್ಯಗಳನ್ನು ಒದಗಿಸಿ ಪ್ರೋತ್ಸಾಹಿಸುತ್ತಿರುವುದು ಅಭಿನಂದನೆಯ ಎಂದು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದ ಶೀನಪ್ಪಗೌಡರವರು ಕ್ಷೇತ್ರದ ವತಿಯಿಂದ ಕೊಡಮಾಡುವ ಉಚಿತ ಬರವಣಿಗೆ ಪುಸ್ತಕಗಳನ್ನು ಎಲ್ಲ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು. ಕ್ಷೇತ್ರದ ವತಿಯಿಂದ ನೀಡಲ್ಪಡುವ ಉಚಿತ ಬರವಣಿಗೆ ಪುಸ್ತಕಗಳನ್ನು ಕ್ಷೇತ್ರದ ಪ್ರತಿನಿಧಿಯಾಗಿ ಆಗಮಿಸಿ ತಮ್ಮ ದಿವ್ಯ ಹಸ್ತದಿಂದ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಾ.ಸತೀಶ್ಚಂದ್ರ ಸರ್ ಅವರು ಪ್ರಾಥಮಿಕ ಶಾಲಾ ಮಕ್ಕಳಿಗೆ ಪ್ರಾರಂಭದಲ್ಲಿ ಉತ್ತಮ ಶಿಕ್ಷಣ ದೊರೆತಾಗ ಮಾತ್ರ ಆ ಮಗು ಎಲ್ಲಾ ಕ್ಷೇತ್ರದಲ್ಲೂ ಮುಂದೆ ಬರಲು ಸಾಧ್ಯವಿದೆ.ಶಾಲೆಯಲ್ಲಿ ಶಿಕ್ಷಕರ ಮಾರ್ಗದರ್ಶನ ಎಷ್ಟು ಮುಖ್ಯವೂ ಅಷ್ಟೇ ಆ ಮಗುವಿಗೆ ಮನೆಯಲ್ಲಿ ಮಾರ್ಗದರ್ಶನ ಸಿಗುವಂತಾಗಬೇಕು.ಮಕ್ಕಳು ಪ್ರಶ್ನಿಸುವ ಮನೋಭಾವ ಇಟ್ಟುಕೊಂಡಾಗ ಮಾತ್ರ ಮಗುವಿನಲ್ಲಿ ನಾಯಕತ್ವದ ಗುಣ ಬೆಳೆಯಲು ಸಾಧ್ಯ.ಆಡಳಿತ ಮಂಡಳಿಯು ಈ ಶಾಲೆಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಿ ಕೊಟ್ಟಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳ ಪ್ರಾರ್ಥನ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಿಕ್ಷಕ ಪವನ್‍ ಕುಮಾರ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಶೀಲಾ.ಎನ್ ರವರು ಧನ್ಯಾವಾದಗೈದ ಕಾರ್ಯಕ್ರಮವನ್ನು ಶಿಕ್ಷಕ ನಿಶಾಂತ್ ಕುಮಾರ್ ರವರು ನಿರೂಪಿಸಿದರು.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕ ವೃಂದದವರು ಆಗಮಿಸಿದ್ದರು.ಶಾಲೆಯ ಎಲ್ಲ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Exit mobile version