

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾದ್ಯಮ ಶಾಲೆ ಅಳದಂಗಡಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಮೀಕ್ಷ ಇವರು ಯೋಗದ ಮಹತ್ವವನ್ನು ತಿಳಿಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಇವರ ನಿರ್ದೇಶನದಂತೆ ಎಲ್ಲಾ ವಿದ್ಯಾರ್ಥಿಗಳು ಯೋಗ ಮಾಡುವುದರ ಮೂಲಕ ಅಂತರಾಷ್ಟ್ರೀಯ ಯೋಗಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಮುಖ್ಯ ಶಿಕ್ಷಕಿ ಸಿಸ್ಟರ್ ಶೀಬಾ ಜೋಸೆಫ್ ಹಾಗೂ ಶಿಕ್ಷಕ , ಶಿಕ್ಷಕೇತರ ವೃಂದದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು .