Site icon Suddi Belthangady

ಬೆಳ್ತಂಗಡಿ: ಸಂತ ತೆರೇಸಾ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ: ಜೂ.21ರಂದು ಸಂತ ತೆರೇಸಾ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಆರೋಗ್ಯ ರವರ ಉಪಸ್ಥಿತಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ಚೈತ್ರ ರವರು ಯೋಗದ ಮಹತ್ವ ಹಾಗೂ ಯೋಗ ದಿನಾಚರಣೆಯ ಕುರಿತು ಮಾಹಿತಿಯನ್ನು ನೀಡಿದರು.ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಯೋಗಾಸನಗಳನ್ನು ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

Exit mobile version