

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಭಾಗವಹಿಸಿ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.
ಅಭಿವೃದ್ಧಿ ಅಧಿಕಾರಿ ಕಳೆದ ಸಭೆಯ ನಡಾವಳಿ, ವಾರ್ಡ್ ಸಬೆಯ ನಡಾವಳಿ, ಜಮಾಖರ್ಚಿನ ವಿವರ ನೀಡಿದರು.

ಪಂಚಾಯತ್ ನ ಅಂಗಡಿ ಬಾಡಿಗೆ ಬಾಕಿ ವಿಚಾರದಲ್ಲಿ ಬಾಡಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದರು.ಅಭಿವೃದ್ಧಿಯ ವಿಚಾರದಲ್ಲಿ ಹಲವಾರು ಚರ್ಚೆಗಳು ನಡೆಯಿತು.

ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಆಚಾರ್ಯ, ಗ್ರಾಮ ಪಂಚಾಯತ್ ಅಭವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಪೂವಪ್ಪ ಮಲೆಕುಡಿಯ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು, ಇಲಾಖಾ ಅಧಿಕಾರಿ, ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು
ವಿವಿಧ ಇಲಾಖಾ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.