ಉಜಿರೆ ಶ್ರೀ.ಧ.ಮಂ.ಅ.ಸೆಕೆಂಡರಿ ಶಾಲಾ ಸಂಸತ್ತು ರಚನೆ ಹಾಗೂ ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮ

0

ಉಜಿರೆ: ಶ್ರೀ.ಧ.ಮ.ಅ.ಸೆಕೆಂಡರಿ ಶಾಲೆ ಉಜಿರೆಯಲ್ಲಿ ಶಾಲಾ ಸಂಸತ್ತು ರಚನೆ ಹಾಗೂ ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮವು ಜೂ.24 ರಂದು ನೆರವೇರಿತು.
ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಸತೀಶ್ ಚಂದ್ರರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ವಿವಿಧ ಸಂಘಗಳ ವಾರ್ಷಿಕ ಕಾರ್ಯ ಚಟುವಟಿಕಾ ಫಲಕವನ್ನು ಅನಾವರಣಗೊಳಿಸಿ, ವಿದ್ಯಾಭ್ಯಾಸವೆಂದರೆ ಕೇವಲ ಅಂಕಗಳಿಸುವುದು ಮಾತ್ರವಲ್ಲ. ಒಬ್ಬ ಪರಿಪೂರ್ಣ ಸಶಕ್ತ ವ್ಯಕ್ತಿಯನ್ನು ನಿರ್ಮಾಣ ಮಾಡುವಂತದ್ದು‌, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎನ್ನುವ ಕಿವಿ ಮಾತನ್ನು ಹೇಳುವುದರ ಮೂಲಕ ಶುಭ ಹಾರೈಸಿದರು
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ.ಧ.ಮಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಬಿ.ಸೋಮಶೇಖರ್ ಶೆಟ್ಟಿಯವರು ‘ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನಿಟ್ಟುಕೊಂಡು ಲಭ್ಯ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ಸದೃಢರಾಗಬೇಕು’ ಎನ್ನುವ ಸಂದೇಶವನ್ನು ನೀಡುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯ ಸುರೇಶ್.ಕೆ ರವರು ಶಾಲಾ ನೂತನ ಮಂತ್ರಿಮಂಡಲಕ್ಕೆ ಪ್ರಮಾಣ ವಚನ ಬೋಧಿಸಿ ಮಂತ್ರಿ ಮಂಡಲದ ಕಾರ್ಯವೈಖರಿ ಹಾಗೂ ಜವಾಬ್ದಾರಿಗಳ ಬಗ್ಗೆ ವಿವರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ಶುಭ ಹಾರೈಸಿದರು.
ಶಿಕ್ಷಕರಾದ ಚಂದ್ರಶೇಖರ್ ಭಟ್ ರವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಶಾಲಾ ಸಂಸತ್ತಿನ ಅಧಿವೇಶನ ಹಾಗೂ ಕಾರ್ಯಕಲಾಪ ನೆರವೇರಿತು.ವಿದ್ಯಾರ್ಥಿಗಳು ವಿವಿಧ ಸಂಘಗಳ ವರದಿ ವಾಚಿಸಿದರು.ರತ್ನ ಮಾನಸದ ನಿಲಯ ಪಾಲಕ ಯತೀಶ್ ಬಳಂಜರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪ್ರಥಮ್ ಸ್ವಾಗತ ಭಾಷಣ ಮಾಡಿದರು.ಹಾಗೂ ವಿದ್ಯಾರ್ಥಿ ನಿಖಿಲ್ ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿ ಕುಮಾರಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು .

LEAVE A REPLY

Please enter your comment!
Please enter your name here